ಹುಬ್ಬಳ್ಳಿ: ಈದ್ ಪ್ರಾರ್ಥನೆ ವೇಳೆ ಸಂಘ ಪಾರಿವಾರದ ವಿರುದ್ಧ ಅವಹೇಳನಕಾರಿ ಪ್ಲೇ ಕಾರ್ಡ್ ಪ್ರದರ್ಶಿಸಿದ್ದ ಪ್ರಕರಣದಲ್ಲಿ ಎಸ್‌ಡಿಪಿಐ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್‌ಡಿಪಿಐ ಮುಖಂಡ ಅಬ್ದುಲ್ ಗಪ್ಪುರ್ ಕುರಹಟ್ಟಿ ಬಂಧಿತ.
ಪ್ರಾರ್ಥನೆ ವೇಳೆ ಎಸ್‌ಡಿಪಿಐ ಕಾರ್ಯಕರ್ತರು ಸಂಘ ಪರಿವಾರಗಳ ವಿರುದ್ಧ ಪ್ಲೇ ಕಾರ್ಡ್ ತೋರಿಸಿದ್ದರು. ಇದರಿಂದ ಆಕ್ರೋಶಗೊಂಡು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪನಗರ ಪೊಲೀಸ್ ಠಾಣೆಯಲ್ಲಿ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದರು.
ದೂರಿನ ಅನ್ವಯ ಅಬ್ದುಲ್ ಗಪ್ಪುರ್ ಕುರಹಟ್ಟಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಎಫ್‌ಐಆರ್ ದಾಖಲಾಗುತ್ತಿದ್ದಂತೆ ಅಬ್ದುಲ್ ಗಪ್ಪುರ್‌ನನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.
