

ಮಂಗಳೂರು: ಬಜಪೆ ಕಿನ್ನಿಪದವು ಬಳಿ ರೌಡಿಶೀಟರ್ ಬರ್ಬರ ಹತ್ಯೆ ನಡೆದಿದೆ.
ಸುಹಾಸ್ ಶೆಟ್ಟಿ ಕೊಲೆಯಾದ ಯವಕ. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ನಡೆದಿತ್ತು. ಈ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.