May 2, 2025
IMG-20250501-WA00511-1024x768

ಮಂಗಳೂರು: ಸುರತ್ಕಲ್ ನ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.

ಆಸ್ಪತ್ರೆಗೆ ಬಿಜೆಪಿ‌ ಶಾಸಕ, ಹಿಂದೂ ಕಾರ್ಯಕರ್ತರ ಆಗಮನ

ಇನ್ನು ಸುಹಾಸ್​ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ‌‌.ಆಸ್ಪತ್ರೆಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ‌ ಕಾಮತ್, ಶಾಸಕ ಭರತ್ ಶೆಟ್ಟಿ ಆಗಮಿಸಿದ್ದಾರೆ. ಇನ್ನು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.