December 23, 2024
IMG-20240801-WA0047


ನವದೆಹಲಿ: ‘ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್‌ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?

ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು’ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *