ವಯನಾಡು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಿದರು.
ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಗುರುವಾರ 250ಕ್ಕೆ ಏರಿಕೆಯಾಗಿದೆ. 225 ಜನರು ನಾಪತ್ತೆ ಕುರಿತು ವರದಿಯಾಗಿದೆ. ನೂರಾರು ಜನರು ಗಾಯಗೊಂಡಿದ್ದು, ಸಾವಿರಾರು ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. 300 ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶವಾಗಿರುವುದಾಗಿ ತಿಳಿದುಬಂದಿದೆ.