March 2, 2026
IMG-20260302-WA0081

ಬಂಟ್ವಾಳ: ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್ ಗೇಟ್ ಸಂಪೂರ್ಣ ಮುಚ್ಚಲು ಆಗ್ರಹಿಸಿ ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ಮಾ.3 ರಂದು ನಡೆಯುವ ಹೋರಾಟಕ್ಕೆ ದ.ಕ.ಜಿಲ್ಲಾ ಟೋಲ್ ವಿರೋಧಿ ಸಮಿತಿಯ ಸಂಪೂರ್ಣ ಬೆಂಬಲವಿದೆ ಎಂದು ಸಮಿತಿ ಅಧ್ಯಕ್ಷ ಸುಹೈಲ್ ಕಂದಕ್ ತಿಳಿಸಿದ್ದಾರೆ.

ಬಿ.ಸಿ.ರೋಡಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟೋಲ್ ಗೇಟ್ ತೆರವುಗಾಗಿ ಮಾಡುವ ಜನಪರವಾದ ಹೋರಾಟದಲ್ಲಿ ನಾವು ಭಾಗಿಯಾಗುತ್ತೇವೆ ಮತ್ತು ಟೋಲ್ ತೆರವು ಮಾಡುವವರೆಗೆ ನಿರಂತರವಾಗಿ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಕಾರ ಈ ಟೋಲ್ ಗೇಟ್ ನಿರ್ಮಾಣವಾಗದೆ , ಅವೈಜ್ಞಾನಿಕ ಮತ್ತು ಕಾನೂನುಬಾಹಿರ ರೀತಿಯಲ್ಲಿ ಕಾರ್ಯಚರಿಸುತ್ತಿದೆ ಎಂದು ಆರೋಪ ವ್ಯಕ್ತಪಡಿಸಿದರು.

ಟೋಲ್ ಗೇಟ್ ನಲ್ಲಿ ಕುಡಿಯುವ ನೀರು ಸಹಿತ ಯಾವುದೇ ಮೂಲಭೂತವಾದ ಸೌಕರ್ಯಗಳನ್ನು ಗಮನದಲ್ಲಿಟ್ಟುಕೊಳ್ಳದೆ ಹಣವಸೂಲಿ ಕೇಂದ್ರದ ಮಾದರಿಯಲ್ಲಿ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನ್ಯಾಯವಾಧಿ ಉಮೇಶ್ ಗೌಡ, ಧನರಾಜ್,ಹನೀಫ್ ಖಾನ್ ಕೊಡಾಜೆ, ಅನ್ವರ್ ಸಾದತ್ ಉಪಸ್ಥಿತರಿದ್ದರು.