

ಮಂಗಳೂರು: ಕರಾವಳಿಯಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯಾಗಿದ್ದ ಬೆನ್ನಲ್ಲೇ
ಇಬ್ಬರು ಯುವಕರಿಗೆ ಚೂರಿಯಿಂದ ಇರಿದ ಘಟನೆ ಇಂದು ಮುಂಜಾನೆ ಮಂಗಳೂರಿನಲ್ಲಿ ನಡೆದಿದೆ.
ನಗರ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಶುಕ್ರವಾರ ಮುಂಜಾನೆ ನೌಷಾದ್ ಎಂಬಾತನಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ.
ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರ್ಕೆಟ್‌ಗೆ ತೆರಳಲು ಮುಂಜಾನೆ 3 ಗಂಟೆಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್‌ರ ಬೆನ್ನಿಗೆ ಚೂರಿಯಿಂದ ಇರಿದರು ಎನ್ನಲಾಗಿದೆ. ಬಳಿಕ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉಳ್ಳಾಲದ ಯುವಕನ ಮೇಲೆ ಚೂರಿ ಇರಿತ
ಯುವಕರ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಆತನಿಗೆ ಇರಿತವಾದ ರೀತಿಯಲ್ಲಿ ಗಾಯಗೊಂಡ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ.
ಗಾಯಗೊಂಡವರನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ.
ಫೈಝಲ್ ಅವರು ಕಲ್ಲಾಪು ಮಾರುಕಟ್ಟೆ ಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.