ಬೆಂಗಳೂರು, ಮೇ 02: 2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಿದ್ದು, https://karresults.nic.in ಜಾಲತಾಣದಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಸದ್ಯ ಪಾಸಾಗಿರುವ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

2025 ಮಾರ್ಚ್ 21ರಿಂದ ಏಪ್ರಿಲ್ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು
