December 23, 2024
raju-poojary

ದಕ್ಷಿಣ ಕನ್ನಡ : ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್​ನಿಂದ ಐವರ ಹೆಸರುಗಳು ಕೇಳಿಬಂದಿದ್ದವು. ಭುಜಂಗ ಶೆಟ್ಟಿ, ಬೈಂದೂರಿನ ರಾಜು ಪೂಜಾರಿ, ಹರಿಪ್ರಸಾದ್ ರೈ, ಡಿ.ಆರ್​.ರಾಜು ಮತ್ತು ಉದಯ್ ಕುಮಾರ್ ಶೆಟ್ಟು ಮುನಿಯಾಲು ಅವರ ಹೆಸರುಗಳು ಕೇಳಿಬಂದಿದ್ದವು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್​ ರಾಜು ಪೂಜಾರಿ ಅವರಿಗೆ ಮಣೆ ಹಾಕಿದೆ. ರಾಜು ಪೂಜಾರಿ ಬೈಂದೂರು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದಾರೆ.

Leave a Reply

Your email address will not be published. Required fields are marked *