ಮಂಗಳೂರು: ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಗ್ರಾಪಂ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನಿಸುವ ವಿಷಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕಮಾರ್ ಮತ್ತು
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ನಾನು ಯಾರ ಮೇಲೂ ಕೈ ಮಾಡಲಿಲ್ಲ ಆದಷ್ಟು ಬೇಗ ಅಧ್ಯಕ್ಷರನ್ನು ಬದಲಿಸಿ ಪಕ್ಷವನ್ನು ಉಳಿಸಿ ಎಂದು ಹೇಳಿದರು.
ಪಕ್ಷದ ಹಿರಿಯ ನಾಯಕರ ಮುಂದೆ ಇಂದು ಮಾರಾಮಾರಿ ನಡೆದಿದ್ದು, ಕಾರ್ಯಕರ್ತರಲ್ಲಿ ಗೊಂದಲಕ್ಕೆ ಕಾರಣವಾಗಿದೆ.