February 3, 2026
IMG-20260203-WA0100

ಮಂಗಳೂರು: ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಫೀಝ್ ಸಾಲೆತ್ತೂರು ನೇಮಕಗೊಂಡಿದ್ದಾರೆ.

ಯುವ ಕಾಂಗ್ರೆಸ್ ಸಕ್ರೀಯ ಕಾಯಕರ್ತ ಸಂಘಟಿತ ಚತುರ ಪಾಣೆಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಫೀಝ್ ಸಾಲೆತ್ತೂರು ಪಕ್ಷ ಸಂಘಟನೆ ಹಾಗೂ ಸಾಮಾಜಿಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆ ಅವರಿಗೆ ಒಳಿದು ಬಂದಿದೆ.

ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಪ್ರದಾನ ಕಾರ್ಯದರ್ಶಿಯದ ಅವಧಿಯಲ್ಲಿ ಶ್ರೀ ಬಿ ರಮನಾಥ ರೈಯವರ ಗರಡಿಯಲ್ಲಿ ಸಂಘಟನಾತ್ಮಕವಾಗಿ ಯುವಕರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದ್ದ ಇವರ ಕಾರ್ಯಕ್ಷಮತೆಯನ್ನು ಮೆಚ್ಚಿ ಪಕ್ಷದ ವರಿಷ್ಠರು ಈ ಜವಾಬ್ದಾರಿಯನ್ನು ನೀಡಿದ್ದಾರೆ. ಹಫೀಝ್ ಸಾಲೆತ್ತೂರು ಅವರು ಕೇವಲ ರಾಜಕೀಯ ಮಾತ್ರವಲ್ಲದೆ, ಕ್ರೀಡೆ ,ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿಯೂ ಸದಾ ಮುಂಚೂಣಿಯಲ್ಲಿರುವವರು. ವಿಶೇಷವಾಗಿ ಕ್ರೀಡಾ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಪ್ರೋತ್ಸಾಹ ಮತ್ತು ಯುವ ಪ್ರತಿಭೆಗಳನ್ನು ಬೆಳೆಸುವಲ್ಲಿ ಅವರಿಗಿರುವ ಆಸಕ್ತಿ ಶ್ಲಾಘನೀಯವಾಗಿದೆ.

ಅಪ್ರತಿಮ ಯುವ ನಾಯಕತ್ವದ ಮೂಲಕ ಗುರುತಿಸಿಕೊಂಡಿರುವ ಇವರು, ಜಿಲ್ಲೆಯ ಯುವ ಕಾಂಗ್ರೆಸ್ ಘಟಕವನ್ನು ಮತ್ತಷ್ಟು ಬಲಪಡಿಸುವ ಆಶಯ ವ್ಯಕ್ತಪಡಿಸಿದ್ದಾರೆ. ಇವರ ಈ ನೇಮಕಾತಿಗೆ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಮತ್ತು ಅಭಿಮಾನಿ ಬಳಗವು ಅಭಿನಂದನೆಗಳನ್ನು ಸಲ್ಲಿಸಿದೆ.