June 4, 2025
Picsart_25-06-03_16-47-10-152

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}

ಅಹಮದಾಬಾದ್ : 9 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಫೈನಲ್ ಆಡಲು ಸಿದ್ಧವಾಗಿದೆ. ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿರುವ ಆರ್​ಸಿಬಿಗೆ ಫೈನಲ್ ಪಂದ್ಯಕ್ಕೂ ಮುನ್ನ ಕಾಡುತ್ತಿದ್ದ ಅದೊಂದು ಭಯಕ್ಕೆ ಮುಕ್ತಿ ಸಿಕ್ಕಿದೆ. ಅದೆನೆಂದರೆ ಫೈನಲ್ ಪಂದ್ಯಕ್ಕೂ ಮುನ್ನ ತಂದೆಯಾದ ಖುಷಿಯಲ್ಲಿದ್ದ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ತಂಡವನ್ನು ತೊರೆದು ಮನೆಗೆ ವಾಪಸ್ಸಾಗಿದ್ದರು. ಹೀಗಾಗಿ ಅವರು ಫೈನಲ್ ಆಡುತ್ತಾರೋ? ಇಲ್ಲವೋ ಎಂಬ ಆತಂಕ ಶುರುವಾಗಿತ್ತು. ಆದರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಮಡದಿ ಹಾಗೂ ಮಗುವಿನ ಮುಖ ನೋಡಿ ಫಿಲ್ ಸಾಲ್ಟ್ ಭಾರತಕ್ಕೆ ವಾಪಸ್ಸಾಗಿದ್ದಾರೆ. ಅಲ್ಲದೆ ಅಹಮದಾಬಾದ್‌ನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

ತಂದೆಯಾದ ಫಿಲ್ ಸಾಲ್ಟ್
ಐಪಿಎಲ್‌ ಫೈನಲ್ ಪಂದ್ಯಕ್ಕೂ ಮುನ್ನ, ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಅವರ ಬದ್ಧತೆ ಮತ್ತು ಕ್ರೀಡಾ ಸ್ಫೂರ್ತಿ ಎಲ್ಲರ ಹೃದಯ ಗೆದ್ದಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೊ ವರದಿಯ ಪ್ರಕಾರ, ಸಾಲ್ಟ್ ತಮ್ಮ ಮೊದಲ ಮಗುವಿನ ಜನನಕ್ಕಾಗಿ ಇಂಗ್ಲೆಂಡ್‌ಗೆ ಹೋಗಿದ್ದರು. ಹೀಗಾಗಿ ಅವರು ಆರ್​ಸಿಬಿ ಪಾಳಯದಿಂದ ಕಾಣಿಸಿಕೊಂಡಿರಲಿಲ್ಲ. ಆದರೆ ಇಂದು ಬೆಳಿಗ್ಗೆ ಸಾಲ್ಟ್ ಅಹಮದಾಬಾದ್‌ಗೆ ಬಂದಿಳಿದಿದ್ದು ತಂಡವನ್ನು ಕೂಡಿಕೊಂಡಿದ್ದಾರೆ. ಮೇ 29 ರಂದು ನಡೆದಿದ್ದ ಕ್ವಾಲಿಫೈಯರ್ -1 ರಲ್ಲಿ ತಂಡದ ಪರ ಆಡಿದ್ದ ಸಾಲ್ಟ್, ಪಂದ್ಯ ಮುಗಿದ ನಂತರ ತಮ್ಮ ದೇಶಕ್ಕೆ ಮರಳಿದ್ದರು. ಹೀಗಾಗಿ ಆರ್‌ಸಿಬಿಯ ತರಬೇತಿ ಸೆಷನ್​ನಲ್ಲಿ ಅವರ ಅನುಪಸ್ಥಿತಿ ಅಭಿಮಾನಿಗಳಲ್ಲಿ ಕಳವಳವನ್ನು ಉಂಟುಮಾಡಿತ್ತು. ಆದರೆ, ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿರುವ ಸುದ್ದಿ ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಭರವಸೆಯನ್ನು ಹುಟ್ಟುಹಾಕಿದೆ.

ಆರ್‌ಸಿಬಿಗೆ ಫಿಲ್ ಸಾಲ್ಟ್ ಅಗತ್ಯ
ಈ ಆವೃತ್ತಿಯಲ್ಲಿ ಸಾಲ್ಟ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಅನೇಕ ಪಂದ್ಯಗಳಲ್ಲಿ ಆರ್‌ಸಿಬಿಗೆ ಬಲವಾದ ಆರಂಭವನ್ನು ನೀಡಿದೆ. ಅವರ ಮತ್ತು ವಿರಾಟ್ ಕೊಹ್ಲಿಯ ಆರಂಭಿಕ ಜೋಡಿ ಪ್ರತಿ ಓವರ್‌ಗೆ 10.29 ರ ರನ್​ ರೇಟ್​ನಲ್ಲಿ ರನ್ ಕಲೆಹಾಕಿತ್ತು. ಹೀಗಾಗಿ ಫೈನಲ್ ಪಂದ್ಯದಲ್ಲೂ ಈ ಜೋಡಿ ಇದೇ ರೀತಿಯ ಪ್ರದರ್ಶನ ನೀಡಿದರೆ ಆರ್​ಸಿಬಿಗೆ ಗೆಲುವು ಸುಲಭವಾಗಿ ದಕ್ಕಲಿದೆ