
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಮತ್ತೆ ನೋಟಿಸ್ ನೀಡಿದ್ದಾರೆ. ಈ ಸಂದರ್ಭದಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಪತ್ರ ಬರೆದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ದೂರು ನೀಡಿದ್ದಾರೆ.
ಅರುಣ ಕುಮಾರ್ ಪುತ್ತಿಲಗೆ 2ನೇ ನೋಟಿಸ್
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪುತ್ತೂರಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ವೇಳೆ ಅರುಣ ಕುಮಾರ್ ಪುತ್ತಿಲ ಅವರು ಇಸ್ಲಾಂ ಧರ್ಮವನ್ನು ಭಯೋತ್ಪಾದನೆಗೆ ಹೋಲಿಸಿ ಭಾಷಣ ಮಾಡಿದ್ದಾರೆ ಎಂದು ಪುತ್ತೂರು ನಗರ ಠಾಣೆಯಲ್ಲಿ ಅಶ್ರಫ್ ಎಂಬುವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪುತ್ತೂರು ಠಾಣೆ ಪೊಲೀಸರು ಅರುಣ ಕುಮಾರ್ ಪುತ್ತಿಲ ಅವರಿಗೆ ಎರಡನೇ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಅರುಣ್ ಸೂಚನೆ ನೀಡಿದ್ದಾರೆ. ಸೋಮವಾರವಷ್ಟೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಅರುಣ ಕುಮಾರ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್ ನೀಡಿದ್ದರು.
ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಸಚಿವೆ ಪತ್ರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಹಿಂದೂ ಪರ ಕಾರ್ಯಕರ್ತರಿಗೆ ಪೊಲೀಸರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದು ದೂರು ನೀಡಿದ್ದಾರೆ. “ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದ ಪೊಲೀಸರು ಹಿಂದೂ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ. ವ್ಯಾಪಾರಿಗಳು ಮತ್ತು ನಾಗರಿಕರ ಮೇಲೂ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಹಿಂದೂ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ಮನೆಗಳಿಗೆ ತಡರಾತ್ರಿ ಭೇಟಿ ನೀಡುತ್ತಿದ್ದಾರೆ. ಅವರ ನಿವಾಸಗಳ ಫೋಟೊ ತೆಗೆದುಕೊಂಡು ಹೋಗುತ್ತಿದ್ದಾರೆ. ಯಾವುದೇ ವಾರಂಟ್ಗಳು ಇಲ್ಲದೆಯೂ ಜಿಪಿಎಸ್ ಮುಖಾಂತರ ಫೋಟೋ ಸೆರೆಹಿಡಿಯುತ್ತಿದ್ದಾರೆ. ಪೊಲೀಸರ ಈ ಕ್ರಮಗಳು ಕಾನೂನು ಬಾಹಿರವಾಗಿದೆ. ಇದು ಮೂಲಭೂತ ಹಕ್ಕುಗಳ ಸ್ಪಷ್ಟವಾದ ಉಲ್ಲಂಘನೆಯಾಗಿದೆ. ತಕ್ಷಣವೇ ತಾವು ಮಧ್ಯಪ್ರವೇಶ ಮಾಡಬೇಕು. ಪೊಲೀಸರ ಕಾನೂನು ಬಾಹಿರ ಕ್ರಮದ ವಿರುದ್ಧ ತನಿಖೆ ನಡೆಸಬೇಕು” ಎಂದು ಪ್ರಾಧಿಕಾರದ ಮುಖ್ಯಸ್ಥ ನ್ಯಾ. ಸುಧೀಂದ್ರ ರಾವ್ ಅವರಿಗೆ ಮನವಿ ಮಾಡಿದ್ದಾರೆ.