June 22, 2026
IMG-20250903-WA0033

ಸುರತ್ಕಲ್: ಇಲ್ಲಿನ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆನಿವಾಸಿ ಪ್ರಜ್ಞಾ(18) ಎಂಬವರು ಕಾಲೇಜಿಗೆಂದು ಹೋದವರು ನಾಪತ್ತೆಯಾಗಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜ್ಞಾ ಅವರು ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದು, ಸೆ. 1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿದ್ದಾರೆ.

ಕಾಣೆಯಾದವರ ಚಹರೆ:- ಎತ್ತರ ಸುಮಾರು5.3 ಅಡಿ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಕಪ್ಪು ಕೂದಲು ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ ಪ್ಯಾಂಟ್ ಧರಿಸಿದ್ದರು.

ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.