December 23, 2024
H_D_Kumaraswamy_1_DH_1563912515

ಬೆಂಗಳೂರು: 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ಟಾಟಾ ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. BNS U/s3(5)308,(2)351(2) ಅಡಿಯಲ್ಲಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಕುಮಾರಸ್ವಾಮಿ ಹಾಗೂ ರಮೇಶ್ ​ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ನಂತರ ಆ ಬಗ್ಗೆ ಹೇಳಿಕೆ ನೀಡಿ, 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು. ಈ ದೂರಿನ ಮೇರೆಗೆ ಇದೀಗ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

Leave a Reply

Your email address will not be published. Required fields are marked *