December 22, 2024
Screenshot_2024-11-03-08-47-24-32_40deb401b9ffe8e1df2f1cc5ba480b12

ಕಟಪಾಡಿ: ಟೂರಿಸ್ಟ್ ಬಸ್ಸೊಂದು ರಸ್ತೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಉದ್ಯಾವರ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಕೊಲ್ಲೂರಿನತ್ತ ತೆರಳುತ್ತಿದ್ದ ಅನ್ಯ ರಾಜ್ಯದ ಟೂರಿಸ್ಟ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *