March 22, 2026
IMG-20250604-WA0063

ಫರಂಗಿಪೇಟೆ: ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಭರತ್ ಕುಮ್ಡೇಲ್ ಮೆನೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿ ತನಿಖಾ ತಂಡ ಇಂದು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಬಂಟ್ವಾಳ ತಾಲೂಕಿನ ಪುದು ಗ್ರಾಮದ ಕುಮ್ಡೇಲ್ ನಲ್ಲಿ ಮನೆ ಶೋಧ ಮಾಡಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.