ಮಂಗಳೂರು: ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಬಲ ಪೈಪೋಟಿಯಾಗಿ ಬಶೀರ್ ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ಬಶೀರ್ ಅವರು ಎಲ್ಲ ನಾಯಕರೊಂದಿಗೆ ಒಳ್ಳೆಯ ಸಂಬಂಧ ಹೊಂದಿದ್ದು, ಹಲವು ಚುನಾವಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಜನತೆಯ ಪರವಾಗಿ ಕೆಲಸ ಅಭಿವೃದ್ದಿಗಳಿಗೆ ಸಹಕರಿಸುತ್ತಿದ್ದಾರೆ.
ಕಳೆದ ವಿಧಾನಸಭಾ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ.
ಅವರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದರೇ ಪಕ್ಷಕ್ಕೆ ಹೆಚ್ಚಿನ ಬಲ ಬರುತ್ತದೆ. ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ, ಪ್ರಾಮಾಣಿಕವಾಗಿ ಕೆಲಸವಾಗಿ ಮಾಡಿದ್ದಾರೆ. ಇಲ್ಲಿಯವರೆಗೆ ಪಕ್ಷದಲ್ಲಿ ಯಾವುದೇ ಅಧಿಕಾರ ಅಥವಾ ಹುದ್ದೆಗೆ ಆಸೆಪಟ್ಟಿರುವುದಿಲ್ಲ. ಸಕ್ರೀಯವಾಗಿ ಪಕ್ಷದ ಕೆಲಸವನ್ನು ನಿಭಾಯಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸೂಕ್ತ ಅಭ್ಯರ್ಥಿಯಾಗಿದ್ದು, ಅವರನ್ನು ಆಯ್ಕೆ ಮಾಡುವ ಮೂಲಕ ದ.ಕ ಜಿಲ್ಲಾ ಕಾಂಗ್ರೆಸ್ ಗೆ ಹೆಚ್ಚಿನ ಬಲ ಬರಲಿದೆ ಎಂದು ಆಪ್ತ ವರ್ಗ ಹೇಳಿದೆ.
