ಬಾಗಲಕೋಟೆ ಶಾಸಕ ಮಾಜಿ ಸಚಿವ ಹೆಚ್.ವೈ.ಮೇಟಿರವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು,ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದು ಸಭಾಧ್ಯಕ್ಷ ಯು.ಟಿ.ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೇಟಿಯವರು ಜನತಾ ಪರಿವಾರದಿಂದ ಬೆಳೆದು ಬಂದು ಗುಳೇದಗುಡ್ಡ ಕ್ಷೇತ್ರದಿಂದ ಎರಡು ಬಾರಿ, ಬಾಗಲಕೋಟೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾದವರು.ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿಯೂ,ಅರಣ್ಯ,ಅಬಕಾರಿ ಖಾತೆಯ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.ಬಹಳ ಕಾಲದ ರಾಜಕೀಯ ಅನುಭವ ಇರುವ ಮೇಟಿಯವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ ಕುಟುಂಬಸ್ಥರಿಗೆ,ಹಿತೈಷಿಗಳಿಗೆ,ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲು ಪ್ರಾರ್ಥಿಸುತ್ತೇನೆಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.
