

ಬ್ರಹ್ಮಾವರ: ಬಾರ್ಕೂರಿನಿಂದ ಆಕಾಶವಾಣಿ ಮಾರ್ಗವಾಗಿ ಸಾಸ್ತಾನ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಮಹಿಳೆಯರಿಬ್ಬರಿಗೆ ಮಾಬುಕಳ ಸೇತುವೆ ಬಳಿ ಟಿಪ್ಪರ್ ಡಿಕ್ಕಿ ಹೊಡೆದು ಇಬ್ಬರೂ ಗಂಭೀರ ಗಾಯಗೊಂಡು ಓರ್ವ ಮಹಿಳೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಸಹಸವಾರೆ ಹನೆಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಮಮ್ತಾಜ್ ಎಂದು ಗುರುತಿಸಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಪೂರ್ಣಿಮಾ ಗಾಯಗೊಂಡು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿಪ್ಪರ್ ನ್ನು ಚಾಲಕನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಗಾಯಾಳುಗಳನ್ನು ಸ್ಥಳೀಯರು ಬ್ರಹ್ಮಾವರದ ಮಹೇಶ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಮ್ತಾಜ್ ಮೃತಪಟ್ಟಿರುತ್ತಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.