February 4, 2026
IMG-20240805-WA0017

ಮಂಗಳೂರು: ಅಸ್ಸುಫ್ಫ ಫೌಂಡೇಶನ್ ಮಂಗಳೂರು ವತಿಯಿಂದ ಉಳ್ಳಾಲ ಖಾಝಿಯಾಗಿದ್ದ ಮರ್ಹೂಂ ಸೈಯದ್ ಫಝಲ್ ಕೋಯಮ್ಮ ಕೂರತ್ ತಂಙಳ್ ಅನುಸ್ಮರಣಾ ಕಾರ್ಯಕ್ರಮವು ಇಂದು ಮಗ್ರಿಬ್ ನಮಾಝ್ ಬಳಿಕ ನಗರದ ಪುರಭವನದಲ್ಲಿ ನಡೆಯಲಿದೆ.

ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಅಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಕರ್ನಾಟಕ ಜಂಇಯತುಲ್ ಉಲಮಾ ಅಧ್ಯಕ್ಷ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಮಸ್ತ ಉಲಮಾ ಒಕ್ಕೂಟದ ಕಾರ್ಯದರ್ಶಿಗಳಾದ ಸಯ್ಯಿದ್ ಖಲೀಲುಲ್ ಬುಖಾರಿ ಮತ್ತು ಪೇರೋಡ್ ಅಬ್ದುರ‌್ರಹ್ಮಾನ್ ಸಖಾಫಿ, ನೇತಾರರಾದ ಸಯ್ಯಿದ್ ಪಾಣಕ್ಕಾಡ್ ಮುನವ್ವರ್ ಅಲಿ ಶಿಹಾಬ್ ತಂಙಳ್, ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಹಝ್ರತ್, ಎಸ್‌ವೈಎಸ್ ರಾಜ್ಯ ಕಾರ್ಯದರ್ಶಿ ಡಾ.ಅಬ್ದುಲ್ ಹಕೀಂ ಅಝ್ಹರಿ, ಕರ್ನಾಟಕ ರಾಜ್ಯ ಹಜ್ ಕಮಿಟಿ ಸದಸ್ಯ ಸಯ್ಯಿದ್ ಅಶ್ರಫ್ ಅಸ್ಸಖಾಫ್ ತಂಙಳ್ ಸಹಿತ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.