ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಆದರೆ ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದ್ದು, ನಾಳೆ ಅಥವಾ ನಾಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಒಟ್ಟಿಗೆ ಜಮಾ ಆಗಲಿದೆ ಎನ್ನಲಾಗಿದೆ.ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ತಿಂಗಳ ಮೊದಲ ವಾರವೇ ಜೂನ್, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಿದೆ ಎಂದು ತಿಳಿಸಿದೆ.ಆಗಸ್ಟ್ 6 ರ ನಾಳೆ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.