ಸುರತ್ಕಲ್: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ನಡೆದಿದೆ.
ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಅವಘಡದಲ್ಲಿ ಯಾವುದೇ ಪ್ರಾಣಹಾನಿಯುಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.