ದೆಹಲಿ :ಇತ್ತೀಚೆಗಷ್ಟೇ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಭಾರತ ತಂಡದಿಂದ ನಿವೃತ್ತಿ ಘೋಷಿಸಿದ ಭಾರತದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಇದೀಗ ಬಿಜೆಪಿ ಸೇರುವ ಮೂಲಕ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ರವೀಂದ್ರ ಜಡೇಜಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಬಗ್ಗೆ, ಜಾಮ್‌ನಗರ ಶಾಸಕಿ ಹಾಗೂ ಜಡೇಜಾ ಪತ್ನಿ ರಿವಾಬಾ ಜಡೇಜಾ ಎಕ್ಸ್ʼನಲ್ಲಿ ಮಾಹಿತಿ ನೀಡಿದ್ದಾರೆ.