ತುಮಕೂರು: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿಕ್ರಮ್ ಎಂದು ಗುರುತಿಸಲಾಗಿದೆ.
ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಮಾತನಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಸಲ್ಮಾನ್ ಖಾನ್ ಜೀವಂತವಾಗಿರಬೇಕಾದರೆ ನಮ್ಮ ದೇವಾಲಯಕ್ಕೆ ಬಂದು ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂ. ನೀಡಬೇಕು. ಈ ರೀತಿ ಮಾಡದಿದ್ದರೆ ನಾವು ಅವರನ್ನು ಕೊಲೆ ಮಾಡುತ್ತೇವೆ, ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ ಎಂದು ಮುಂಬೈ ಪೊಲೀಸರಿಗೆ ಮೆಸೇಜ್ ಕಳುಹಿಸಿದ್ದ.
ಆರೋಪಿಯನ್ನು ಬಂಧಿಸಲಾಗಿದ್ದು ,ಹೆಚ್ಚಿನ ವಿಚಾರಣೆ ನಡೆಯುತ್ತಿದೆ.