April 17, 2025
IMG-20241205-WA0036

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಹತ್ಯಾ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ ಎಂದು ಕೆಯ್ಯೂರಿನ ಮನೆಗೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿದ ಘಟನೆ 5 ರಂದು ಬೆಳಿಗ್ಗೆ ನಡೆದಿದೆ.
ಕೆಯ್ಯೂರು ಕೆಪಿಎಸ್ ಶಾಲಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ಅಬೂಬಕ್ಕರ್ ಸಿದ್ದಿಕ್‌ರವರ ಪತ್ನಿ ವಾಸವಾಗಿದ್ದಾರೆ ಎನ್ನಲಾಗಿದ್ದು ಅಲ್ಲಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಇದಲ್ಲದೆ ಸಿದ್ದಿಕ್‌ರವರ ಸಹೋದರೋರ್ವರು ಕೆಯ್ಯೂರಿನ ಅರಿಕ್ಕಿಲದಲ್ಲಿ ವಾಸವಾಗಿದ್ದು ಅಲ್ಲಿಗೂ ಆಗಮಿಸಿದ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.