March 22, 2026
IMG-20240806-WA0015

ಸಾಗರ: ಸಾಗರದ ಎಲ್ ಬಿ ಕಾಲೇಜು ಸಮೀಪ ತಾಂತ್ರಿಕ ತೊಂದರೆಯಿಂದ ಸರ್ಕಾರಿ ಬಸ್‌ ಹೊತ್ತಿ ಉರಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಟ್ಕಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಎನ್ನಲಾಗಿದ್ದು, ಸಾಗರದ ಎಲ್ ಬಿ ಕಾಲೇಜು ಬಳಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪ್ರಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.