ಮಂಗಳೂರು, ಸೆ.6: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಕೋಡಿಕಲ್ ನಿವಾಸಿ ಕಾಶೀನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಎಂದು ಗುರುತಿಸಲಾಗಿದೆ.
ಇವರಿಬ್ಬರಿದ್ದ ಬೈಕ್ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ.