June 23, 2026
IMG-20241006-WA0017

ಮಂಗಳೂರು : ಕೂಳೂರು ಸೇತುವೆ ಬಳಿ ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಉದ್ಯಮಿಯಾದ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದ್ದು ಅವರು ನಾಪತ್ತೆಯಾಗಿದ್ದಾರೆ.

ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಚುರುಕಿನ ತನಿಖೆ ಕೈಗೊಂಡಿದ್ದಾರೆ.

ಮಮ್ತಾಜ್ ಅಲಿ ಅವರು ತನ್ನ ಮಗಳಿಗೆ ವಾಟ್ಸಪ್ ಮೂಲಕ ಇನ್ನು ನಾನು ಹಿಂತಿರುಗಿ ಬರುವುದಿಲ್ಲ ಎಂಬ ಸಂದೇಶ ಕೂಡ ರವಾನಿಸಿದ್ದಾರೆ ಎನ್ನಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.