April 17, 2025
IMG_LPG_BOTTLING_PLANT_I_2_1_4QASS318

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಬಳಿಕ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಈ ಕುರಿತು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.

ಅನಿಲ ಕಂಪನಿಗಳು ಸಿಲಿಂಡರ್‌ ಬೆಲೆ ಹೆಚ್ಚಿಸುವುದಾಗಿ ತಿಳಿಸಿವೆ, ಹೀಗಾಗಿ ಪ್ರತಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳವಾಗಲಿದೆ.

ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದೆ. ಆದ್ದರಿಂದ ಇನ್ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 553 ರೂ. ಹಾಗೂ ಇತರೇ ಗ್ರಾಹಕರು 803 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 853 ರೂ. ಪಾವತಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವರು ವಿವರಿಸಿದ್ದಾರೆ.