February 4, 2026
Screenshot_20241007_113241_Facebook

ಮಂಗಳೂರು :ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಝ್ ಅಲಿ ಅವರ ಅನಿರೀಕ್ಷಿತ ಅಗಲಿಕೆಗೆ ಮಾಜಿ ಸಚಿವ ರಮಾನಾಥ ರೈ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಆತ್ಮೀಯರಾಗಿದ್ದ ಮುಮ್ತಾಝ್ ಅಲಿ ಕೃಷ್ಣಾಪುರ ಅವರ ಅನಿರೀಕ್ಷಿತ ನಿಧನವು ದಿಗ್ಭ್ರಮೆ ಮತ್ತು ದುಃಖ ನೋವು ತಂದಿದೆ. ಸಮಾಜಕ್ಕೆ ಮತ್ತು ಸಮುದಾಯಕ್ಕೆ ದೊಡ್ಡ ನಷ್ಟವಾಗಿದೆ. ದೇವರು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಹಾಗೂ ಅವರ ಆತ್ಮಕ್ಕೆ ಚಿರ ಶಾಂತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸಿದರು.