March 22, 2026
IMG-20251007-WA0044

ಬೆಳ್ತಂಗಡಿ: ತಾಲೂಕಿನ ಕುತ್ಲೂರು ಗ್ರಾಮದ ಮಂಜುಶ್ರೀ ನಗರದ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ನುಗ್ಗಿದ ಕಳ್ಳರು ಸುಮಾರು 9.50 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಅ. 6ರಂದು ಬೆಳಕಿಗೆ ಬಂದಿದೆ.

ಮಂಜುಶ್ರೀನಗರದ ಅವಿನಾಶ್ ಅವರ ಮನೆಗೆ ಕಳ್ಳರು ನುಗ್ಗಿದ್ದು, ಅ. 2ರ ಮಧ್ಯಾಹ್ನದಿಂದ ಅ. 6ರ ಸಂಜೆಯ ಮಧ್ಯೆ ಘಟನೆ ನಡೆದಿದೆ ಎಂದು ಪೊಲೀಸ್ ದೂರಿನಲ್ಲಿ‌ ತಿಳಿಸಿದ್ದಾರೆ.