February 4, 2026

ದೆಹಲಿ : ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಎಎಪಿ ಪರಿಷ್ಠ ಅರವಿಂದ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದೆ. ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಅವರಿಗೆ ಸೋಲಾಗಿದೆ. ಇದು ಎಎಪಿಗೆ ಅರಗಿಸಿಕೊಳ್ಳಲಾರದ ತುತ್ತಾಗಿ ಪರಿಣಮಿಸಿದೆ. ಅಬಕಾರಿ ಹಗರಣ ಹಾಗೂ ಭ್ರಷ್ಟಾಚಾರ ಆರೋಪಗಳು ಕೇಜ್ರಿವಾಲ್ ಸೋಲಿಗೆ ಪ್ರಮುಖ ಕಾರಣಗಳು ಎನ್ನಲಾಗುತ್ತಿದೆ.

ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್​ಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ. ಇದರೊಂದಿಗೆ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್​ಗೆ ಭಾರೀ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ.