March 22, 2026

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ಬಜೆಟ್‌ ನಾಡಿನ ಪ್ರಗತಿ, ಸಮೃದ್ಧಿ ಹಾಗೂ ಸ್ವಾವಲಂಬನೆಗೆ ಪೂರಕವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದ್ದಾರೆ

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಎಲ್ಲಾ ವರ್ಗಗಳ ಶ್ರೇಯೋಭಿವೃದ್ದಿಯ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಹಿಡಿದ ಕನ್ನಡಿಯಾಗಿದೆ.
ವಿಶೇಷವಾಗಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಈ ಯೋಜನೆಗಳು ಪ್ರಾದೇಶಿಕವಾಗಿ ಆರೋಗ್ಯ, ಶಿಕ್ಷಣ, ಮೀನುಗಾರಿಕೆ, ಪ್ರವಾಸೋದ್ಯಮ, ಮೂಲಸೌಕರ್ಯ, ಪರಿಸರ ಸಂರಕ್ಷಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳನ್ನು ಒಳಗೊಂಡಿದ್ದು, ಕರಾವಳಿಯ ಪ್ರಗತಿಗೆ ಹೊಸ ದಿಕ್ಕು ನೀಡಲಿವೆ ಎಂದರು.