February 4, 2026

ಮಂಗಳೂರು: ಸುಮಾರು ಹತ್ತು ದಿನಗಳ ನಂತರ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಪತ್ತೆಯಾಗಿದ್ದಾನೆ. ಅನೇಕ ದಿನಗಳ ಹಿಂದೆ ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ಹಾಗೂ ಊರಿನ ಜನತೆ ದಿಗಂತ್ ಹುಡುಕಾಟದಲ್ಲಿ ತೊಡಗಿದ್ದರು.

ಪಶ್ಚಿಮ ‌ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ‌ಕನ್ನಡ ಜಿಲ್ಲೆ ಎಸ್ಪಿ ಯತೀಶ್‌ ನೇತೃತ್ವದಲ್ಲಿ ‌ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು. ಜಿಲ್ಲೆಯ ವಿವಿಧ ಠಾಣೆಗಳ ಸಬ್ ಇನ್ಸ್ ಪೆಕ್ಟರ್ ‌ಗಳನ್ನು ಮತ್ತು ಜಿಲ್ಲೆಯ ವಿವಿಧ ಠಾಣೆಗಳ ಕ್ರೈಮ್ ವಿಭಾಗದಲ್ಲಿ ಕರ್ತವ್ಯ ಮಾಡುತ್ತಿರುವ ಸಿಬ್ಬಂದಿಗಳನ್ನು ತನಿಖೆಯಲ್ಲಿ ಜೋಡಿಸಿಕೊಂಡಿದ್ದರು.