ಮಂಗಳೂರು : ಕೇಂದ್ರ ಸರ್ಕಾರದ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಮುಸ್ಲಿಂ ಸಂಘಟನೆಗಳು ಮಾರ್ಚ್ 9ರ ಭಾನುವಾರ ಮಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ. ಪ್ರಸ್ತುತ ಜಾಥಾವನ್ನು ಎರಡು ಪ್ರಬಲ ಸುನ್ನೀ ಸಂಘಟನೆಗಳು ಮುನ್ನಡೆಸಲಿದ್ದಾರೆ

ಎರಡು ಪ್ರಬಲ ಸುನ್ನೀ ಮುಸ್ಲಿಂ ಸಂಘಟನೆಗಳ ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಮಾಣಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಪ್ರತಿಭಟನಾ ಜಾಥಾದಲ್ಲಿ ಎರಡೂ ವಿಭಾಗಗಳ ವಿವಿಧ ಸಂಘಟನೆಗಳ ಕಾರ್ಯರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಆಯೋಜಕರು ಹೇಳಿದ್ದಾರೆ.
ನಾಳೆಯ ದಿನ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ಸಂಘಟನೆಗಳಿಂದ ಬೆಂಬಲ ಸೂಚಿಸಿದರೆ ಹಾಗೂ ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಲಾಗಿದೆ.
ಬೆಳಿಗ್ಗೆ 9.30ಕ್ಕೆ ಮಂಗಳೂರಿನ ಹಂಪನಕಟ್ಟೆಯಿಂದ ಪ್ರಾರಂಭಗೊಳ್ಳುವ ಕಾಲ್ನಡಿಗೆ ಜಾಥಾ ಕ್ಲಾಕ್ ಟವರ್‌ವರೆಗೆ ಸಾಗಲಿದೆ. ಎರಡೂ ವಿಭಾಗಗಳ ಧಾರ್ಮಿಕ ವಿದ್ವಾಂಸರು, ಸಂಘಟನಾ ಪ್ರಮುಖರು ಜಾಥಾದ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿ ಜಮಾತಿನ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದೆ.
