December 21, 2024
Vinesh-Phogat-54_1724161256054_1724161298353

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಆರಂಭಿಕ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಹರಿಯಾಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ.

ಬೆಳಗ್ಗೆ 8:15ರ ವೇಳೆಗೆ ಹರಿಯಾಣದಲ್ಲಿ ಕಾಂಗ್ರೆಸ್‌ 29, ಬಿಜೆಪಿ 17, ಐಎನ್‌ಎಲ್‌ಡಿ 2 ಹಾಗೂ ಇತರೇ ಪಕ್ಷಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಇನ್ನೂ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿ ಕೂಟ 10, ಬಿಜೆಪಿ 8, ಪಿಡಿಪಿ 2 ಹಾಗೂ ಇತರೇ ಪಕ್ಷಗಳು 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಚುನಾವಣೋತ್ತರ ಫಲಿತಾಂಶಗಳು ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್‌ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಮೈತ್ರಿಕೂಟಕ್ಕೆ ಅಧಿಕಾರ ಎಂದು ಭವಿಷ್ಯ ನುಡಿದಿವೆ.

ಉಭಯ ರಾಜ್ಯಗಳಲ್ಲಿ ತಲಾ 90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ.

Leave a Reply

Your email address will not be published. Required fields are marked *