December 22, 2024
UT_Khader

ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ ದಲ್ಲಿ ಗ್ಯಾಸ್ ಸ್ಫೋಟ ಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರ,ಸೂಕ್ತ ಚಿಕಿತ್ಸೆ ಒದಗಿಸಲು ಸಭಾಧ್ಯಕ್ಷ ಯು ಟಿ ಖಾದರ್ ಸೂಚನೆ

ಗ್ಯಾಸ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದ್ದು,ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

ಈ ಬಗ್ಗೆ ವಿವರ ತಿಳಿದು ಆಸ್ಪತ್ರೆಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಭಾಧ್ಯಕ್ಷ ಯು ಟಿ ಖಾದರ್,ವೈದ್ಯರೊಂದಿಗೆ ಮಾತುಕತೆ ನಡೆಸಿ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿದ ಯು ಟಿ ಖಾದರ್,ಸೂಕ್ತ ತನಿಖೆ ನಡೆಸಿ ಗ್ಯಾಸ್ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *