April 18, 2025
modi_0-profile_image_one_to_one


ವಯನಾಡು: ಭೂಕುಸಿತ ಪೀಡಿತ ವಯನಾಡ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೇಟಿ ನೀಡಲಿದ್ದಾರೆ.
ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ವಲಯದಲ್ಲಿ ಸೇನೆ ನಿರ್ಮಿಸಿದ ಪರಿಹಾರ ಶಿಬಿರ, ಆಸ್ಪತ್ರೆ ಮತ್ತು ಬೈಲಿ ಸೇತುವೆಯ ಬಳಿ ಮೋದಿ ಇಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋದಿ ಅವರು ವಿಪತ್ತು ವಲಯದ ವೈಮಾನಿಕ ಸಮೀಕ್ಷೆಯನ್ನೂ ನಡೆಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಐಎಎಫ್ ಹೆಲಿಕಾಪ್ಟರ್ ಮೂಲಕ ವಯನಾಡ್ ಗೆ ತೆರಳಲಿದ್ದಾರೆ. ಪ್ರಧಾನಿ ಭೇಟಿ ಬಳಿಕ ಅವರು ವಯನಾಡ್ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ಸಾಧ್ಯತೆ ಇದೆ.
ವಯನಾಡ್ ವಿಪತ್ತು ಪ್ರತಿಕ್ರಿಯೆಯ ಮೇಲ್ವಿಚಾರಣೆ ನಡೆಸುತ್ತಿರುವ ಕೇರಳ ಕ್ಯಾಬಿನೆಟ್ ಉಪಸಮಿತಿ ಮತ್ತು ಜಿಲ್ಲಾಡಳಿತವು ಪ್ರಧಾನಿ ಅವರನ್ನು ಸ್ವಾಗತಿಸಲಿದ್ದು , ಮೋದಿ ಅವರು ಬದುಕುಳಿದವರು ಮತ್ತು ಗಾಯಗೊಂಡವರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಅವರು ಅದೇ ದಿನ ಸಂಜೆ 4 ಗಂಟೆಗೆ ನವದೆಹಲಿಗೆ ತೆರಳಲಿದ್ದಾರೆ