March 22, 2026
IMG-20240809-WA0059

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ. ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನಗರ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ರವಾನೆ ಮಾಡಲಾಗಿದ್ದು, ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.