ಮುಂಬೈ: ಖ್ಯಾತ ಉದ್ಯಮಿ, ಟಾಟಾ ಗ್ರೂಪ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
86 ವರ್ಷದ ರತನ್ ಟಾಟಾ ಅವರು ಲೈಫ್ ಸಪೋರ್ಟ್ ನಲ್ಲಿದ್ದಾರೆ ಎನ್ನಲಾಗಿದೆ. ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಟಾಟಾ ಗ್ರೂಪ್ ನ ಪ್ರಧಾನ ಕಛೇರಿ ಬಾಂಬೆ ಹೌಸ್ ಖಚಿತಪಡಿಸಿದೆ.
“ಟಾಟಾ ಕುಟುಂಬಕ್ಕೆ ಹತ್ತಿರವಿರುವ ಅವರಲ್ಲಿ ಒಬ್ಬರು ಮತ್ತು ಅವರ ವೈದ್ಯಕೀಯ ಸ್ಥಿತಿಯ ಬಗ್ಗೆ ಮಾಹಿತಿ ಹೊಂದಿರುವ ಮೂಲಗಳು ಅವರ ಅನಾರೋಗ್ಯದ ಸ್ವರೂಪದ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ” ಎಂದು ರಾಯಿಟರ್ಸ್ ವರದಿ ಮಾಡಿದೆ.