March 22, 2026

ದುಬೈ: ಇಲ್ಲಿನ ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ರವಿವಾರ ಆಯೋಜಿಸಲಾಗಿರುವ ‘ಬ್ಯಾರಿ ಮೇಳ-2025’ಸಮಾರೋಪವು ರವಿವಾರ ರಾತ್ರಿ ನಡೆಯಿತು.

ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(ಬಿಸಿಸಿಐ) ಆಶ್ರಯದಲ್ಲಿ ನಡೆಯುತ್ತಿರುವ ಈ ಮೇಳವನ್ನು ಮಂಗಳೂರು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ (ಬಿಸಿಸಿಐ) ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸೌದಿ ಅರೇಬಿಯಾದ ಅಲ್ ಮುಝೈನ್ ನ ಸಿಇಓ ಝಕರಿಯ ಜೋಕಟ್ಟೆ ಮಾತನಾಡಿ, ಬ್ಯಾರಿಗಳು ಶಾಂತಿ ಪ್ರಿಯರು, ಸೌಹಾರ್ದ ಪ್ರೇಮಿಗಳು. ಎಲ್ಲರೊಂದಿಗೆ ಬೆರೆತುಕೊಂಡು ಹೋಗುವವರು. ಬ್ಯಾರಿ ಸಮುದಾಯ ತನ್ನ ಸಂಸ್ಕೃತಿಯನ್ನು ಮರೆಯಬಾರದು. ಈ ನಿಟ್ಟಿನಲ್ಲಿ ನಾವು ನಮ್ಮ ಸಮುದಾಯಕ್ಕೆ ಬೇಕಾದ ಕಾರ್ಯಚಟುವಟಿಕೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು.

ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(ಬಿಸಿಸಿಐ) ಯುಎಇ ಘಟಕದ ಅಧ್ಯಕ್ಷ ಹಿದಾಯತ್ ಅಡ್ಡೂರು ಅಧ್ಯಕ್ಷೀಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್., ಗೋಳ್ತಮಜಲು ರಝಕ್ ಹಾಜಿ, ಬದ್ರುದ್ದೀನ್, ಇಮ್ತಿಯಾಜ್, ರೊನಾಲ್ಡ್ ಮಾರ್ಟಿಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.