
ಕಾಸರಗೋಡು: ಆಟೋ ಚಾಲಕ ಹಾಗೂ ಅಪ್ರಾಪ್ತ ಹತ್ತನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ.
ಮೃತ ಆಟೋ ಚಾಲಕ ಪ್ರದೀಪ್(42), ಹಾಗೂ ವಿದ್ಯಾರ್ಥಿನಿ ಶ್ರೇಯಾ(15) ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿನಿ ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಿಂದ ಅರ್ಧ ಕಿ. ಮೀ ದೂರದ ಕಾಡಿನಲ್ಲಿ ಆದಿತ್ಯವಾರ ಬೆಳಿಗ್ಗೆ 10. 30 ರ ವೇಳೆಗೆ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ತನಿಖೆ ನಡೆಸಿದ್ದರು . ಆದರೆ ತಿಂಗಳಾಗುತ್ತಾ ಬಂದರೂ ಇಬ್ಬರ ಬಗ್ಗೆ ಯಾವುದೇ ಸುಳಿವು ಲಭಿಸದ ಹಿನ್ನಲೆಯಲ್ಲಿ ಶನಿವಾರದಿಂದ ಪೊಲೀಸರು ಹಾಗೂ ಸ್ಥಳೀಯರು ಮನೆ ಪರಿಸರದ ಕಾಡು ಕೇಂದ್ರೀಕರಿಸಿ ಶೋಧ ನಡೆಸಿದ್ದು , ಇಬ್ಬರ ಮೃತದೇಹ ಒಂದೇ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಒಂದು ಚಾಕು ಮತ್ತು ಎರಡು ಮೊಬೈಲ್ ಫೋನ್‌ಗಳು ಪತ್ತೆಯಾಗಿದೆ.