June 29, 2026
ministerDsudhakrdeath

ಚಿತ್ರದುರ್ಗ: ಅನಾರೋಗ್ಯ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ನಿಧನರಾಗಿದ್ದಾರೆ.

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಧಾಕರ್ ಇಂದು ಬೆಳಗ್ಗೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಧಾಕರ್ ನಿಧನದ ಕುರಿತು ಕಿಮ್ಸ್ ಆಸ್ಪತ್ರೆ ಅಧಿಕೃತ ಘೋಷಣೆ ಮಾಡಿದೆ.

ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ವೈಯಕ್ತಿಕ ಜೀವನದಲ್ಲಿ ಸರಳ ವ್ಯಕ್ತಿತ್ವದ ಇವರು ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ. ಸಚಿವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕದ ಛಾಯೆ ಆವರಿಸಿದೆ.