July 11, 2025
IMG-20250710-WA0035

ಸುಳ್ಯ: ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45)ಎಂಬವರು ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತಾಗಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್ ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.