ಹಾಸನ :ಕೆಲ ದಿನಗಳ ಹಿಂದೆ ಅಷ್ಟೇ ಕಾಮಗಾರಿ ಬಳಿಕ ಮತ್ತೆ ಪ್ರಾರಂಭವಾದ ಹಾಸನ-ಮಂಗಳೂರು ಸಂಪರ್ಕ ಕಲ್ಪಿಸುವ ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿತವಾಗಿದೆ. ಭಾರೀ ಪ್ರಮಾಣದ ಮಣ್ಣು, ಮರ-ಗಿಡಗಳು ಹಳಿಯ ಮೇಲೆ ಬಿದ್ದಿದೆ. ಆದ್ದರಿಂದ ಹಾಸನ-ಮಂಗಳೂರು ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ರೈಲಿನಲ್ಲಿಯೇ ಕಾದು ಕುಳಿತಿದ್ದಾರೆ. ಮಣ್ಣು ತೆರವುಗೊಳಿಸುವ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ರೈಲು ಇಲಾಖೆ ಸ್ಪಷ್ಟನೆ ನೀಡಿದೆ.