December 22, 2024
28-1485615693-krishna4

ಬೆಂಗಳೂರು, ಡಿಸೆಂಬರ್​​ 10: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

Leave a Reply

Your email address will not be published. Required fields are marked *