ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ನಿಧನದಿಂದ ತೀವ್ರ ಆಘಾತಕ್ಕೀಡಾಗಿದ್ದೇನೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಸಂತಾಪ ಸೂಚಿಸಿದ್ದಾರೆ.
‘ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು.ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ’ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ’ .
‘ಕೃಷ್ಣ ಅವರ ಕುಟುಂಬ ವರ್ಗಕ್ಕೆ ಅತೀವ ಸಂತಾಪಗಳು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ’ ಎಂದು ತಿಳಿಸಿದ್ದಾರೆ