ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಒಣಹವೆ ಮುಂದುವರಿಯಲಿದ್ದು, ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ.

ಇನ್ನೂ ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ಇರಲಿದೆ ಎಂದು ತಿಳಿದು ಬಂದಿದೆ.
ದ.ಕ. ಜಿಲ್ಲಾಡಳಿತದಿಂದ ಜನತೆಗೆ ಹಲವು ಸಲಹೆಗಳು ನೀಡಿದೆ.
ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಲು ಸೂಚನೆ ನೀಡಿದಾರೆ.
ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಲು ಸಲಹೆ ನೀಡಿದಾರೆ.
ಬಿಸಿಗಾಳಿಗೆ ತುತ್ತಾದ ವ್ಯಕ್ತಿಗೆ ತಕ್ಷಣ ಚಿಕಿತ್ಸೆ ನೀಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮನವಿ ಮಾಡಿದ್ದಾರೆ
