ಭಾನುವಾರ ರಾತ್ರಿ ಕುಟುಂಬದೊಂದಿಗೆ ಊಟಕ್ಕೆ ತೆರಳಿದ್ದ ಸಮಯದಲ್ಲಿ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸಮೀರ್ ರವರ ಹತ್ಯೆ ರಾತ್ರಿ 11 ಗಂಟೆ ಸುಮಾರಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ನಡೆದಿದೆ.
ಸಮೀರ್ ಕಾರಿನಿಂದ ಇಲ್ಲಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯೀದ್ದ ತಂಡವು ಸಮೀರ್ ರವರನ್ನು ಬೆನ್ನಟ್ಟಿ ಹತ್ಯೆ ಮಾಡಿದ್ದಾರೆ.
ಘಟನೆ ನಡೆದ ತಕ್ಷಣ ಅಲ್ಲಿ ಸೇರಿದ ಜನರನ್ನು ನೋಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಸಮೀರ್ ಜೈಲಿನಿಂದ ಬಿಡುಗಡೆಯಾಗಿದ್ದರು.